ಮೈಸೂರು: ಮಾಧ್ಯಮಗಳಲ್ಲಿ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಂಬಂಧಿಸಿದ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ.
ಕಾಂಗ್ರೆಸ್ ಮುಖಂಡ ಹಾಗೂ ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅಧ್ಯಕ್ಷರಾಗಿರುವ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ವಿರುದ್ಧ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮೈಸೂರಿನ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡದಂತೆ ಕೋರಿದ್ದ ಅರ್ಜಿ ಸಂಬಂಧ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿತು. ಅರ್ಜಿಯನ್ನು ಜ.6ಕ್ಕೆ ಮುಂದೂಡಲಾಗಿದೆ.