ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ  
ಜಿಲ್ಲೆ

ಮುಡಾ ಹಗರಣ, ಸಿಎಂ ರಾಜೀನಾಮೆ ಸಾಧ್ಯತೆ

ನವೀನ ಬಿ.ಎಂ

ಶಿವಮೊಗ್ಗ: ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ನಿವೇಶನ ಪಡೆದಿದೆ ಎನ್ನುವ ಆರೋಪವಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಸಂಗ ಬರಬಹುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯಲ್ಲಿ ಪ್ರತಿ ದಿನ ಜನಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪಾದಯಾತ್ರೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.
ವಕ್ಫ್ ಆಸ್ತಿ ಬಗ್ಗೆ ಸುಪ್ರೀಂಕೋರ್ಟ್ ಸಹ ಪ್ರಶ್ನೆ ಮಾಡುವ ಅವಕಾಶ ಇಲ್ಲ. ಅಂತಹ ಅಧಿಕಾರವನ್ನು ವಕ್ಫ್ ಮಂಡಳಿಗೆ ಕಾಂಗ್ರೆಸ್ ಸರ್ಕಾರ ನೀಡಿತ್ತು. ಅಲ್ಲಿ ಬಡವರಿಗೂ ಅವಕಾಶ ಸಿಗಬೇಕು. ಸ್ವಾತಂತ್ರ್ಯ ನಂತರ ರಚನೆಯಾದ ಸಮಿತಿಯಲ್ಲಿ ಮಹಿಳೆಯರಿಗೂ ಅವಕಾಶ ಮಾಡಿಕೊಡಬೇಕು. ಹಾಗಾಗಿ ಅದರ ಮರುಪರಿಶೀಲನೆ ಆಗಬೇಕಿದ್ದು, ಎನ್‌ಡಿಎ ಸರ್ಕಾರ ಆ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ತಿಳಿಸಿದರು.