ಜಿಲ್ಲೆ

ಮುಡಾ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ

reportermys

ಮೈಸೂರು: ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 14 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಸೀಲ್ದಾರ್, ಎಫ್‌ಡಿಎ ಹಾಗೂ ಅಟೆಂಡರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಮುಡಾ ವಿಶೇಷ ತಹಸೀಲ್ದಾರ್ ಬಿ.ಕೆ.ಶ್ರೀನಿವಾಸ್, ಎಫ್‌ಡಿಎ ರಂಗಣ್ಣ, ಅಟೆಂಡರ್ ವರಲಕ್ಷ್ಮೀ ಶುಕ್ರವಾರ ಬೆಳಗ್ಗೆ ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಶ್ರೀರಾಂಪುರ ಬಡಾವಣೆಯ 7 ನಿವೇಶನಗಳಿಗೆ ಖಾತೆ ಮಾಡಿಸುವ ಸಂಬಂಧ ಕಾರ್ತಿಕ್‌ಗೌಡ ಮುಡಾಕ್ಕೆ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ ಅಧಿಕಾರಿಗಳು 2 ವರ್ಷಗಳಿಂದ ಖಾತೆ ಮಾಡಿಕೊಡದೆ ವಿಳಂಬ ಮಾಡಿದ್ದರು. ಖಾತೆ ಮಾಡಿಕೊಡಲು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬೇಸತ್ತ ಕಾರ್ತಿಕ್‌ಗೌಡ ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ಮೊರೆ ಹೋಗಿದ್ದರು.