ಮುದಗಲ್ ಸಮೀಪದ ಸುಲ್ತಾನಪುರ-ಮೂಡಲದಿನ್ನಿ ನಡುವಿನ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಸಾರಿಗೆ ಸಂಪರ್ಕ ಕಡಿತಗೊಂಡಿರುವುದು. 
ಜಿಲ್ಲೆ

ಮಳೆಗೆ ತುಂಬಿ ಹರಿದ ಹಳ್ಳಗಳು

ಮುದಗಲ್: ಪಟ್ಟಣ ಸೇರಿದಂತೆ ಸುತ್ತ್ತಲಿನ ಗ್ರಾಮ ಗಳಲ್ಲಿ ಬುಧವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ನಾಗರಹಳ, ನಾಗಲಾಪುರ, ಮಾಕಾಪುರ ಗ್ರಾಮಗಳಲ್ಲಿ ಸುರಿದ ಮಳೆಗೆ ಚೆಕ್ ಡ್ಯಾಂಗಳು ಭರ್ತಿಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಬನ್ನಿಗೋಳ ಮೂಲಕ ಮುದೇನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿರುವ, ಸುಲ್ತಾನಪುರದಿಂದ ಮೂಡಲದಿನ್ನಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿರುವ ಹಳ್ಳಗಳು ತುಂಬಿ ಹರಿಯುತ್ತಿದ್ದು, ಸಾರಿಗೆ ಸಂಪರ್ಕ ಕಳೆದುಕೊಂಡಿವೆ.

ಗ್ರಾಮೀಣ ಭಾಗದ ಹಳ್ಳಗಳಿಗೆ ಸಂಪರ್ಕ ಸೇತುವೆ ನಿರ್ಮಿಸಬೇಕೆಂದು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ವಿವಿಧ ಗ್ರಾಮಸ್ಥರು ದೂರಿದರು. ಹಳ್ಳಗಳು ತುಂಬಿ ಹರಿಯುತ್ತಿ ರುವುದರಿಂದ ಶಾಲೆ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಪರದಾಡಬೇಕಾಯಿತು.