ಮುದಗಲ್‌ನ ಕನ್ನಾಪುರಹಟ್ಟಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಗುರುವಾರ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ನಡೆಸಿದರು. 
ಜಿಲ್ಲೆ

ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ ಶಿಕ್ಷಕರು

Raichur

ಮುದಗಲ್: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೇಡಿಕೆಗೆ ಸ್ಪಂದಿಸದ ಸರ್ಕಾರದ ವಿರುದ್ಧ್ದ ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ನಡೆಸಿದರು.

ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯಶಿಕ್ಷಕರಿಗೆ 15 ರಿಂದ 25 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ಹಾಗೂ ದೈಹಿಕ ಶಿಕ್ಷಕರ ಬೇಡಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಅನೇಕ ಬಾರಿ ಒತ್ತಾಯಿಸಿದರೂ ಈ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೂಚನೆಯಂತೆ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರುವುದಾಗಿ ಶಿಕ್ಷಕರು ತಿಳಿಸಿದರು.