ಮುದಗಲ್‌ನಲ್ಲಿ ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ಪುರಸಭೆ ಸದಸ್ಯರು ಮನವಿ ಸಲ್ಲಿಸಿದರು. ಪುರಸಭೆ ಹನುಮಂತಪ್ಪ ನಾಯಕ, ಮಾಜಿ ಶಾಸಕ ಡಿ.ಎಸ್. ಹೂಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ ಇತರರಿದ್ದರು. 
ಜಿಲ್ಲೆ

ಮುದಗಲ್ ಕುಡಿವ ನೀರಿನ ಸಮಸ್ಯೆ ಪರಿಹರಿಸಿ

ನರೇಶ್ ಕುಮಾರ್

ಮುದಗಲ್: ಕುಡಿವ ನೀರಿನ ಸಮಸ್ಯೆ ನಿವಾರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪುರಸಭೆ ಸದಸ್ಯರು ಭಾನುವಾರ ಪಟ್ಟಣಕ್ಕೆ ಆಗಮಿಸಿದ್ದ ಪೌರಾಡಳಿತ ಸಚಿವ ರಹೀಂಖಾನ್‌ಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಬಗೆಹರಿಸಬೇಕು. ನೀರು ಸಂಗ್ರಹ ತೊಟ್ಟಿ ನಿರ್ಮಾಣ ಮಾಡಬೇಕು. 2015-16ನೇ ಸಾಲಿನಲ್ಲಿ ಕೈಗೊಂಡಿರುವ ನವಗ್ರಾಮಗಳ ಕುಡಿವ ನೀರಿನ ಯೋಜನೆಯ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೀಘ್ರವೇ ಮರು ಆರಂಭಿಸಬೇಕು.

ಪುರಸಭೆಯಲ್ಲಿ ದಿನಗೂಲಿ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕುಡಿವ ನೀರಿನ ನೌಕರರು, ವಾಹನ ಚಾಲಕರು ಮತ್ತು ಸ್ಯಾನಿಟರಿ ಸಿಬ್ಬಂದಿ ಸೇವೆ ಕಾಯಂಗೊಳಿಸಬೇಕೆಂದು ಒತ್ತಾಯಿಸಿದರು. ಮಾಜಿ ಶಾಸಕ ಡಿ.ಎಸ್. ಹೂಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ, ಪುರಸಭೆ ಸದಸ್ಯ ಹನುಮಂತಪ್ಪ ನಾಯಕ, ಪ್ರಮುಖರಾದ ರಹೀಂ ಅಲಿ ಇತರರಿದ್ದರು.