ಮುದಗಲ್ ಸಮೀಪದ ಕಿಲಾರಹಟ್ಟಿ ಗ್ರಾಮದಲ್ಲಿ ದಸರಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ಗೆ ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವರಾಜ ಜೆಲ್ಲಿ, ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್, ಪ್ರಮುಖರಾದ ಮಂಜುನಾಥ್ ಹಟ್ಟಿ, ಶರಣಬಸವ, ಹನುಮನಗೌಡ ಪಾಟೀಲ್ ಇದ್ದರು. 
ಜಿಲ್ಲೆ

ಹಿರಿಯರ ಮಾರ್ಗದರ್ಶನದಿಂದ ಸಾಧನೆ ಮಾಡಿ

ಮುದಗಲ್: ವಿದ್ಯಾರ್ಥಿಗಳು ಆಟದ ಜತೆಗೆ ಓದಿನ ಕಡೆಗೆ ಹೆಚ್ಚು ಗಮನಹರಿಸಿ ವಿವಿಧ ನೌಕರಿಗೆ ಆಯ್ಕೆಯಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರ ಗೌಡ ಪಾಟೀಲ್ ಕರೆ ನೀಡಿದರು.

ಸಮೀಪದ ಕಿಲಾರಹಟ್ಟಿ ಗ್ರಾಮದಲ್ಲಿ ಸರ್ಕಾರಿ ನೌಕರರ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ದಸರಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ಗೆ ಚಾಲನೆ ನೀಡಿ ಮಾತನಾಡಿದರು. ಪುಟ್ಟ ಗ್ರಾಮದಲ್ಲಿ 70ಕ್ಕೂ ಹೆಚ್ಚು ಜನ ಸರ್ಕಾರಿ ನೌಕರಿಗೆ ಸೇರಿರುವುದು ಶ್ಲಾಘನೀಯ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಎಲ್ಲರೂ ಒಗ್ಗೂಡಿ ಕ್ರೀಡಾಕೂಟ ಆಯೋಜಿಸುತ್ತಿರುವುದು ಗ್ರಾಮದ ಯುವಕರಿಗೆ ಮಾದರಿಯಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಹಿರಿಯರ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಉನ್ನತ ಸಾಧನೆ ಮಾಡಿ ಊರಿನ ಕೀರ್ತಿ ಹೆಚ್ಚಿಸಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವರಾಜ ಜೆಲ್ಲಿ ಮಾತನಾಡಿ, ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಉತ್ತಮಪಡಿಸಲು ಸಹಕಾರಿಯಾಗಿದ್ದು, ಎಲ್ಲರೂ ಕ್ರೀಡಾ ಸ್ಫೂರ್ತಿಯಿಂದ ಆಡಬೇಕು ಎಂದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್, ಸರ್ಕಾರಿ ನೌಕರರಾದ ಮಂಜುನಾಥ್ ಹಟ್ಟಿ, ಶರಣಬಸವ, ಹನುಮನಗೌಡ ಪಾಟೀಲ್, ಗ್ರಾಪಂ ಸದಸ್ಯರಾದ ಬೀರಪ್ಪ, ಅಮರೇಶ್ ಗೊರೇಬಾಳ, ಪ್ರೇಮ್‌ಸಿಂಗ್, ಎಸ್ಡಿಎಂಸಿ ಅಧ್ಯಕ್ಷ ನಾಗನಗೌಡ ಪಾಟೀಲ್ ಇತರರಿದ್ದರು.