ಮುದಗಲ್: ಪಟ್ಟಣದ ಸಮೀಪದ ಪಿಕಳಿಹಾಳ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಸಂಜೆ ಕೆರೆಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಪ್ಪ ಗೊರೇಬಾಳ (32) ಮೃತನು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರಾಮಪ್ಪ ಅವರ ಪತ್ನಿ ಶೇಕಮ್ಮ ಮುದಗಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ವೆಂಕಟೇಶ ಮಾಡಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.