ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬ್ರಹ್ಮಶ್ರೀ ನೀಲೇಶ್ವರ ಕೆ.ಯು.ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಬಲಿ ಉತ್ಸವ, ವಸಂತಕಟ್ಟೆ ಪೂಜೆ, ಅಶ್ವತ್ಥ ಕಟ್ಟೆ ಪೂಜೆ, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಜರುಗಿತು.
ಸಜಿಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ, ಜಿಪಂ ಮಾಜಿ ಸದಸ್ಯರಾದ ಕೆ.ರವೀಂದ್ರ ಕಂಬಳಿ, ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಎ.ಸಿ.ಭಂಡಾರಿ, ಕರ್ನಾಟಕ ಬ್ಯಾಂಕ್ ಚೀಪ್ ಮ್ಯಾನೇಜರ್ ಲಕ್ಷ್ಮೀನಾರಾಯಣ, ಪ್ರಮುಖರಾದ ಶಿವರಾಮ ಮೆಯ್ಯ, ಎಸ್.ಶ್ರೀಕಾಂತ ಶೆಟ್ಟಿ, ನಂದರಾಮ ರೈ, ವಿಶ್ವನಾಥ ಆಳ್ವ, ಸದಾನಂದ ಶೆಟ್ಟಿ, ಮಹಾಬಲ ಕೊಟ್ಟಾರಿ ಮೊದಲಾದವರು ಉಪಸ್ಥಿತರಿದ್ದರು.