ಜಿಲ್ಲೆ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹಿಸಿ

ಎ. ಆರ್. ರಘುರಾಮ
  • ಮೂಗೂರು : ಪ್ರತಿ ಮಗುವಿನಲ್ಲೂ ವಿವಿಧ ಬಗೆಯ ಪ್ರತಿಭೆ ಅಡಗಿದ್ದು, ಅವುಗಳ ಅನಾವರಣಕ್ಕೆ ಪ್ರೋತ್ಸಾಹಿಸೋಣ ಎಂದು ಮೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ. ಡಿ. ಲೋಕೇಶ್ ಹೇಳಿದರು.
  • ಮೂಗೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ಶ್ರೀ ತ್ರಿಪುರ ಸುಂದರಿ ರಂಗ ವೇದಿಕೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿಭಾಗದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಪ್ರಾಥಮಿಕ ಹಂತದಲ್ಲೇ ಕೆಲವು ಅಭ್ಯಾಸ, ಹವ್ಯಾಸಗಳನ್ನು ರೂಢಿಸಿಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ಅವುಗಳು ಪ್ರತಿಭಾ ವಿಕಸನಕ್ಕೆ ಸಹಕಾರಿಯಾಗಲಿವೆ. ಹಾಗಾಗಿ ಪ್ರತಿ ಮಗುವಿನ ಪ್ರತಿಭೆಯನ್ನು ಪ್ರಾರಂಭದಲ್ಲೇ ಗುರುತಿಸಲು ಪ್ರತಿಭಾಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಅವರು ಹೇಳಿದರು.
  • ಎಸ್‌ಡಿಎಂಸಿ ಅಧ್ಯಕ್ಷ ಎಂ. ರಂಗಸ್ವಾಮಿ ಅಧ್ಯಕ್ಷತೆ ವಹಿಸಿಮಾತನಾಡಿದರು. ಉಪ ಪ್ರಾಂಶುಪಾಲ ಸಿ. ಪುಟ್ಟಸ್ವಾಮಿ, ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸಾದ, ಕಾರ್ಯದರ್ಶಿ ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರಾಜು, ಉಪನ್ಯಾಸಕ ಬಿ. ಮಹೇಶ, ಶಿಕ್ಷಕರು ಉಪಸ್ಥಿತರಿದ್ದರು.