ಹೆಬ್ರಿ: ಮುಳ್ಕಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಂಭ್ರಮ, ನವೀಕೃತ ಕಂಪ್ಯೂಟರ್ ಕೊಠಡಿ, ಎಎನ್‌ಎಫ್ ಕೊಡಮಾಡಿದ ಮೇಲ್ಛಾವಣಿ, ಮುನಿಯಾಲು ಲಯನ್ಸ್ ಕ್ಲಬ್ ನೀಡಿದ ಔಷಧೀಯ ವನವನ್ನು ಉದ್ಘಾಟಿಸಲಾಯಿತು.
ಮುನಿಯಾಲು ಲಯನ್ಸ್ ಮುಖಂಡ ಗೋಪಿನಾಥ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಂತಿ ಪ್ರಭು, ನಾಗೇಶ ಪೂಜಾರಿ, ಚೇತನ ಉಪಸ್ಥಿತರಿದ್ದರು.
ಸಂಜೆ ನಡೆದ ಕಾರ್ಯಕ್ರಮವನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು. ಕಡ್ತಲ ಗ್ರಾಪಂ ಅಧ್ಯಕ್ಷ ಸುಕೇಶ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
ಮುನಿಯಾಲು ಗೋಧಾಮ ನಿರ್ದೇಶಕ ಜಿ.ರಾಮಕೃಷ್ಣ ಆಚಾರ್, ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ ಟಿ, ಶಿಕ್ಷಕರ ಸಂಘ ಅಧ್ಯಕ್ಷ ರಮಾನಂದ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ ಕುಮಾರ್ ಶೆಟ್ಟಿ, ಕಡ್ತಲ ಡಾ.ಪ್ರಮೋದ್ ಕುಮಾರ್ ಹೆಗ್ಡೆ, ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಶೆಟ್ಟಿ, ಕಾರ್ಯದರ್ಶಿ ಮುನಿಯಾಲು ಗೋಪಿನಾಥ ಭಟ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉಮೇಶ್, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಕೌಶಿಕ್ ಆಚಾರ್ಯ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಪ್ರಭು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ ಪೂಜಾರಿ, ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಜನಾರ್ದನ ಬೆಳಿರಾಯ ಸ್ವಾಗತಿಸಿದರು. ಗೌರವ ಶಿಕ್ಷಕಿ ಪ್ರಪುಲ್ಲ ವರದಿ ವಾಚಿಸಿದರು. ನಿಶಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕ್ರೀಡಾ ಕಾರ್ಯದರ್ಶಿ ಹಳೇ ವಿದ್ಯಾರ್ಥಿಗಳ ಬಹುಮಾನಿತ ಪಟ್ಟಿ ವಾಚಿಸಿದರು. ನವೀನ್ ಭಟ್, ರೂಪಾಶ್ರೀ, ನಾರಾಯಣ್ ನಿರೂಪಿಸಿದರು.