ಕುಶಾಲನಗರ:
ಕುಶಾಲನಗರ ಕ್ಲಸ್ಟರ್ ವ್ಯಾಪ್ತಿಯ ಪಟ್ಟಣದ ಸರಹದ್ದಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮದ ಒಂದನೇ ತರಗತಿ ಆರಂಭಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಮಾಹಿತಿ ನೀಡಿದ ಸಿ.ಆರ್.ಪಿ., ಟಿ.ಈ. ವಿಶ್ವನಾಥ್, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ ದಿಸೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುತ್ತಿದೆ. ಸರ್ಕಾರಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಪೋಷಕರು ಸಹಕರಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲಾಗುತ್ತಿದ್ದು, ಇದರಿಂದ ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲ ಭಾಷೆ ಕಲಿಯಲು ಸುಲಭವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಮಾತನಾಡಿ, ತಮ್ಮ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು
ತುAಬಾ ಸಂತಸ ತಂದಿದೆ. ಪೋಷಕರು ತಮ್ಮ ಮಕ್ಕಳ ಕಲಿಕಾ ಪ್ರಗತಿ ಬಗ್ಗೆ ತಿಳಿಯಲು ಆಗಿಂದಾಗ್ಗೆ ಶಾಲೆಗೆ ಭೇಟಿ ನೀಡಬೇಕು ಎಂದು ಹೇಳಿದರು.
ಶಾಲಾ ಶಿಕ್ಷಕರಾದ ಎಸ್.ಆರ್. ಶಿವಲಿಂಗ, ಟಿ.ಆರ್. ರಂಗಸ್ವಾಮಿ, ಎಸ್‌ಡಿಎಂಸಿ ಸದಸ್ಯರಾದ ರಶ್ಮಿ, ಹೇಮ, ಸುಮಯ, ಶಿಕ್ಷಕರು, ಪೋಷಕರು,
ವಿದ್ಯಾರ್ಥಿಗಳು ಇದ್ದರು.