ಜಿಲ್ಲೆ

ಮುಮ್ಮಿಗಟ್ಟಿ ಶಾಲೆಗೆ ಸಮಗ್ರ ವೀರಾಗ್ರಣಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಇತ್ತೀಚೆಗೆ ಏರ್ಪಡಿಸಿದ್ದ ನರೇಂದ್ರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮುಮ್ಮಿಗಟ್ಟಿ ಸರ್ಕಾರಿ ಪ್ರೌಢಶಾಲೆ ಮಕ್ಕಳು ಉತ್ತಮ ಸಾಧನೆ ಮಾಡುವ ಮೂಲಕ ಸಮಗ್ರ ವೀರಾಗ್ರಣಿ ಪಡೆದಿದ್ದಾರೆ.
ಕೂಟದಲ್ಲಿ ಒಟ್ಟು 10 ಬಂಗಾರದ ಪದಕ, 5 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ. ಬಾಲಕ ಹಾಗೂ ಬಾಲಕಿಯರ ಥ್ರೋಬಾಲ್​ನಲ್ಲಿ ಪ್ರಥಮ, ಬಾಲಕಿಯರ ವಾಲಿಬಾಲ್​ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದಲ್ಲದೆ ಕಬಡ್ಡಿಯಲ್ಲಿ ಬಾಲಕ ಹಾಗೂ ಬಾಲಕಿಯರ ತಂಡಗಳು ದ್ವೀತಿಯ ಸ್ಥಾನ ಪಡೆದಿದ್ದಾರೆ. ಸಾಧನೆ ಮಾಡಿದ ಮಕ್ಕಳಿಗೆ ಶಾಲೆ ಮುಖ್ಯಾಧ್ಯಾಪಕಿ ಕೆ.ಜೆ. ಅಸ್ನೋಟಿಕರ್​, ಎಸ್​ಡಿಎಂಸಿ ಅಧ್ಯಕ್ಷ ರಾಜು ಮಲ್ಲೂರ, ದೈಹಿಕ ಶಿಕ್ಷಣ ಶಿಕ್ಷಕಿ ಉಮಾ ತಡಕೋಡ ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.