ಜಿಲ್ಲೆ

ಲಕ್ಷ್ಮೀ ಕನಕ ನರಸಿಂಹ ದೇವಸ್ಥಾನ ಜಾತ್ರಾ ಮಹೋತ್ಸವ

Gadag - Shivanand Hiremath

ಮುಂಡರಗಿ ಪಟ್ಟಣದ ಕೋಟೆಗುಡ್ಡದ ಶ್ರೀ ಲಕ್ಷ್ಮೀ ಕನಕ ನರಸಿಂಹ ದೇವಸ್ಥಾನ ಜಾತ್ರಾ ಮಹೋತ್ಸವ ನಿಮಿತ್ತ ಶನಿವಾರ ಸಂಜೆ ಸಕಲ ವಾದ್ಯ ಮೇಳದೊಂದಿಗೆ ಸಾವಿರಾರು ಭಕ್ತರ ಜಯಘೋಷದ ಮಧ್ಯೆ ಮಹಾರಥೋತ್ಸವ ಸಂಭ್ರಮ, ಸಡಗರದಿಂದ ಜರುಗಿತು. ಜಾತ್ರಾ ಮಹೋತ್ಸವ ಹಿನ್ನೆಲೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದುಕೊಂಡರು.