Mundgod Strike: ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದವರು ತಾಲೂಕಿನ ಮಳಗಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಜರುಗಿತು.
ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಬೆಳೆ ವಿಮೆ ನೀಡಬೇಕು, ಮಳೆಯಿಂದ ಬೆಳೆ ಹಾನಿಯಾಗಿದ್ದು ರೈತರ ಖಾತೆಗಳಿಗೆ ಪರಿಹಾರ ಜಮಾ ಮಾಡಬೇಕು ಎಂದು ರೈತರು ಒತ್ತಾಯಿಸಿದರು.
ಅಲ್ಲದೇ, ರೈತರ ಸಾಲ ಮನ್ನಾ ಮಾಡಬೇಕು, ಅರಣ್ಯ ಅತಿಕ್ರಮಾನದಾರರಿಗೆ ಹಕ್ಕುಪತ್ರ ನೀಡಿ ಬೆಳೆ ಪರಿಹಾರ ನೀಡಬೇಕು, ಪುನಃ ಅತಿಕ್ರಮಣ ಭೂಮಿ ಜಿಪಿಎಸ್ ಮಾಡಬೇಕು, ವಿದ್ಯುತ್ ಇಲಾಖೆ ಖಾಸಗೀಕರಣ ಮಾಡುವುದನ್ನು ಕೈ ಬಿಡಬೇಕು, ರೈತರ ಜಮೀನುಗಳು ಕೆಜಿಪಿ ಮಾಡಿ ಕೊಡಬೇಕು, ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿ ದುರಸ್ತಿ ಮಾಡಬೇಕು, ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದರು.
ಅಡಕೆ ಬೆಳೆಗೆ ಸೂಕ್ತ ಪರಿಹಾರ ಹಾಗೂ ವಿಮೆ ಮಂಜೂರಿ ಮಾಡಬೇಕು, ಹಾಗೂ ಮಳಗಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಿ ಮಾಡುವಂತೆ ಒತ್ತಾಯಿಸಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಒಂದು ತಾಸಿಗೂ ಅಧಿಕ ಸಮಯ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಸತೀಶ ನಾಯ್ಕ Mundgod Strike ನೇತೃತ್ವ ವಹಿಸಿದ್ದರು.