ಜಿಲ್ಲೆ

ಭೀಮಸೇನ ಜೋಶಿ ರಂಗಮಂದಿರದಲ್ಲಿ ಸಂಗೀತ ಸಂಜೆ

ಗದಗ: ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹಿಮೆ ಸಾರುವ ಸುಂದರ ಸಂಗೀತ ಕಾರ್ಯಕ್ರಮವು ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಸೋಮವಾರ ನಡೆಯಿತು. ಖ್ಯಾತ ಗಾಯಕಿ ಸಾದ್ವಿನಿ ಕೊಪ್ಪ, ಡಾ. ರಾಮು ಕಾಸರ್, ತಬಲಾ ವಾದಕ ವಿಜಯಕುಮಾರ, ಕೀಬೋರ್ಡ್ ವಾದಕ ಬಸವರಾಜ, ನಂದೀಶ ಬುವ ಮೊದಲಾದ ಪ್ರತಿಭಾವಂತ ಕಲಾವಿದರು ತಮ್ಮ ಮನಮೋಹಕ ಗಾಯನ ಮತ್ತು ವಾದ್ಯ ಕೌಶಲದಿಂದ ಪ್ರೇಕ್ಷಕರ ಹೃದಯ ಗೆದ್ದರು. ಕಾರ್ಯಕ್ರಮದ ಆರಂಭದಲ್ಲಿ ಹುಯಿಲಗೋಳ ನಾಯಣರಾಯರ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು ಎಂಬ ಗೀತೆಯೊಂದಿಗೆ ಜರುಗಿತು. ಕಲಾವಿದರು ಶಿಶುನಾಳ ಶರೀಫರ ಜನಪ್ರಿಯ ಗೀತೆಗಳನ್ನು ಪ್ರಸ್ತುಪಡಿಸಿದರು. ನಟ ಡಾ. ರಾಜಕುಮಾರ ಅವರ ಚಲನಚಿತ್ರದ ಹಾಡುಗಳು ಮನಸೂರೆಗೊಂಡವು.