ಜಿಲ್ಲೆ

ಮುಸ್ಲಿಂ ಮುಖಂಡರ ಗುಪ್ತಸಭೆ - ವಿಹಿಂಪ ಕಾರ್ಯಕ್ರಮದಲ್ಲಿ ಶಾಸಕ ಭಾಗಿ ಹಿನ್ನೆಲೆ

Mangaluru - Nishantha Narayana

ಪುತ್ತೂರು: ವಿಶ್ವ ಹಿಂದು ಪರಿಷತ್ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾದ ವಿಚಾರದಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರ ಗುಪ್ತ ಸಭೆಯನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಲ್ಲದೆ, ಸಂಘ ಪರಿವಾರದ ಮುಖಂಡರ ಕಾಲಿಗೆ ಬಿದ್ದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜಾತ್ಯಾತೀತ ಸಿದ್ಧಾಂತ ಹೊಂದಿರುವ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿರುವ ನಡುವೆ, ಹೋಗಿರುವ ವಿಚಾರವನ್ನು ಸಮರ್ಥಿಸಿಕೊಳ್ಳುವ ಕಾರ್ಯವಾಗುತ್ತಿದೆ. ಕಾಂಗ್ರೆಸ್ ನಾಯಕರು ಈ ಬಗ್ಗೆ ಧ್ವನಿಯೆತ್ತುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಪುತ್ತೂರಿನ ಮನೆಯೊಂದರಲ್ಲಿ ಗುಪ್ತ ಸಭೆ ನಡೆಸಿ ವಿವಿಧ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.