ಜಿಲ್ಲೆ

ಪಹಲ್ಗಾಮ್ ಕೃತ್ಯಕ್ಕೆ ಮುಸ್ಲಿಂ ಸಂಘಟನೆಗಳ ಆಕ್ರೋಶ

ರೇಷ್ಮೆ ನಗರ ಡೆಸ್ಕ್

ಹಾರೋಹಳ್ಳಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧ ಖಂಡಿಸಿ ಮುಸ್ಲಿಂ ಸಂಘಟನೆಗಳು ಪಟ್ಟಣದ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.

ಮುಸ್ಲಿಂ ಯೂತ್ ಅಸೋಸಿಯೇಷನ್ ಮತ್ತು ಇತರ ಮುಸ್ಲಿಂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾವಣೆಗೊಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತದ ಮೇಲೆ ಪಾಕಿಗಳು ನಿರಂತರವಾಗಿ ಕಾಲು ಕೆರೆದುಕೊಂಡು ಜಗಳ ಮಾಡುತ್ತಿದ್ದು, ಅಮಾಯಕರ ಮೇಲೆ ತಮ್ಮ ಪರಾಕ್ರಮ ತೋರುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ನಡೆದ ದಾಳಿ ಅಮಾನುಷ ಕೃತ್ಯವಾಗಿದೆ. ಯಾವುದೇ ಧರ್ಮ ಹಿಂಸೆ ಮಾಡಲು ಎಲ್ಲೂ ಹೇಳಿಲ್ಲ. ಈ ರೀತಿಯ ಮಾರಣಹೋಮ ನಡೆಸಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದರು.

ಕಾಶ್ಮೀರ ಭೂಮಿಯ ಮೇಲಿನ ಸ್ವರ್ಗವಾಗಿದ್ದು, ಪ್ರವಾಸಿಗರು ನೋಡಲು ಹೋದ ಸಂದರ್ಭದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಹೇಯಕೃತ್ಯವಾಗಿದ್ದು, ಸೈನಿಕರು ಉಗ್ರರನ್ನು ಸದೆಬಡಿಯಬೇಕು ಎಂದು ಒತ್ತಾಯಿಸಿದರು. ಬಳಿಕ ಉಗ್ರರ ಗುಂಡಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.