ಜಿಲ್ಲೆ

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು

Gadag - Desk - Tippanna Avadoot

ಮುಂಡಗೋಡ: ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಪಟ್ಟಣದ ಮೂರು ಪ್ರಾರ್ಥನಾ ಮಂದಿರದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಂತರ ಶುಭಾಷಯ ವಿನಿಮಯ ಮಾಡಿಕೊಂಡರು. ತಾಲೂಕಿನ ಮಳಗಿ, ಪಾಳಾ, ಕಾತೂರ, ಗುಂಜಾವತಿ, ಇಂದೂರ, ಹುನಗುಂದ, ನಂದಿಕಟ್ಟ, ಭದ್ರಾಪುರ, ಚವಡಳ್ಳಿ, ಚಿಗಳ್ಳಿ, ಮೈನಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು.