ಜಿಲ್ಲೆ

ಜನವರಿಯಲ್ಲಿ ಕಾರ್ಯಾಚರಣೆ ಆರಂಭಿಸಿ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಸ್ಮಾರ್ಟ್​ಸಿಟಿ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ನಗರದ ಹಳೇ ಬಸ್ ನಿಲ್ದಾಣ ಮರು ನಿರ್ಮಾಣ ಕಾಮಗಾರಿಯನ್ನು ಡಿಸೆಂಬರ್​ನಲ್ಲಿ ಪೂರ್ಣಗೊಳಿಸಿ ಜನವರಿ (2025) ಮೊದಲ ವಾರದಲ್ಲಿ ಸಾರಿಗೆ ಕಾರ್ಯಾಚರಣೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ಹಳೇ ಬಸ್ ನಿಲ್ದಾಣ ಮರು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2022ರಲ್ಲಿ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. 2024ರ ಆಗಸ್ಟ್​ನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಮತ್ತೆ ವಿಳಂಬಕ್ಕೆ ಅವಕಾಶವಿಲ್ಲದಂತೆ ಡಿಸೆಂಬರ್​ನಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಬೇಸ್​ವೆುಂಟ್​ನಲ್ಲಿ ರ್ಪಾಂಗ್​ಗೆ ಸ್ಥಳಾವಕಾಸ ಕಲ್ಪಿಸಲಾಗಿದೆ. ನೆಲಮಹಡಿಯಲ್ಲಿ ನಗರ ಸಾರಿಗೆ, ಬಿಆರ್​ಟಿಎಸ್ ಚಿಗರಿ ಬಸ್ ನಿಲುಗಡೆ ಹಾಗೂ ಮೊದಲ ಮಹಡಿಯಲ್ಲಿ ಉಪ ನಗರ ಸಾರಿಗೆ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. 5 ಅಂತಸ್ತಿನವರೆಗೆ ವಿಸ್ತರಿಸುವಷ್ಟು ಸದೃಢವಾಗಿ ಕಟ್ಟಡವನ್ನು ನಿರ್ವಿುಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭವಿಷ್ಯದಲ್ಲಿ ವಾಕರಸಾ ಸಂಸ್ಥೆಯು ವಾಣಿಜ್ಯ ಉದ್ದೇಶಕ್ಕೆ ಕಟ್ಟಡವನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.

ಬಸ್ ನಿಲ್ದಾಣದ ಆಗಮನ-ನಿರ್ಗಮನ ಮಾರ್ಗ ಇಕ್ಕಟ್ಟಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಕುರಿತು ಟ್ರಯಲ್ ರನ್ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಸಮಸ್ಯೆಗಳು ಎದುರಾದಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳೇ ಸರಿಪಡಿಸಬೇಕು. ಸ್ಮಾರ್ಟ್ ಸಿಟಿ ಯೋಜನೆಯ ಯಾವುದೇ ಕಾಮಗಾರಿಗಳಲ್ಲಿ ನ್ಯೂನ್ಯತೆ ಕಂಡು ಬಂದಲ್ಲಿ ಸರಿಪಡಿಸಿಕೊಡಬೇಕಾಗುತ್ತದೆ. ನ್ಯೂನ್ಯತೆಗಳನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರದ ನಿರ್ಧಾರದಂತೆ ಸ್ಮಾರ್ಟ್ ಸಿಟಿ ಯೋಜನೆಯ ಹಲವು ಕಾಮಗಾರಿಗಳು ಈಗಾಗಲೇ ಡಿಮ್್ಡ ಹಸ್ತಾಂತರ ಆಗಿವೆ ಎಂದು ಉತ್ತರಿಸಿದರು.