ಮಂಗಳೂರು: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಹಿರಿಯ ಪುರುಷ ಮತ್ತು ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉಳ್ಳಾಲದ ಮುತ್ತಪ್ಪ ಹ್ಯಾಮರ್ ಥ್ರೋ ವಿಭಾಗದಲ್ಲಿ 59.30 ಮೀಟರ್ ಎಸೆದು ರಾಜ್ಯ ಕ್ರೀಡಾಕೂಟದ ಹೊಸ ದಾಖಲೆಯೊಂದಿಗೆ ಚಿನ್ನದ ಪದಕ ವಿಜೇತರಾಗಿದ್ದಾರೆ. ಇವರು ಹ್ಯಾಮರ್ ಥ್ರೋ ಆಟಗಾರ ಪ್ರೇಮನಾಥ್ ಶೆಟ್ಟಿ ಅವರಿಂದ ತರಬೇತಿ ಪಡೆದಿದ್ದಾರೆ.