ಬೆಂಗಳೂರು: ವಚನಗಳ ತಾತ್ವಿಕ ವಿಚಾರಗಳನ್ನು ಸಮರ್ಥವಾಗಿ ಇಂಗ್ಲಿಷಿಗೆ ಭಾಷಾಂತರಿಸಿರುವ ಸಾಹಿತಿ ಬಸವರಾಜ್ ಎಲಿಗಾರ್ ಅವರ My me is Thee (ನನ್ನೊಳಗಿನ ನಾನು ನೀನೇ) ಕೃತಿಯು ಮೇ 25ರ ಭಾನುವಾರ ಬಿಡುಗಡೆಗೊಳ್ಳಲಿದೆ.
ರೇಸ್‌ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದಲ್ಲಿ ಬೆಳಗ್ಗೆ 10ಕ್ಕೆ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಆಧ್ಯಾತ್ಮಿಕ ಚಿಂತಕರಾದ ಶ್ರೀಜಂಬುನಾಥ ಮಳಿಮಠ್ ವಹಿಸಲಿದ್ದಾರೆ. ಕರ್ನಾಟಕ ಲೋಕಾಯುಕ್ತರಾದ ಬಿ.ಎಸ್.ಪಾಟೀಲ್ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ ಬಿದರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ಶರಣ ಚಿಂತಕರಾದ ಮಹಾಂತೇಶ್ ಬಿರಾದರ್ ಸೇರಿದಂತೆ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ವಿಜಯಪುರದಲ್ಲಿ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ್ ಎಲಿಗಾರ್ ಅವರು ವಚನ ಸಾಹಿತ್ಯದ ಆಳ-ಅಗಲವನ್ನು ಅಧ್ಯಯನ ಮಾಡಿದ್ದು, ಭಾಷೆ, ಶಬ್ಧ, ಭಾವನೆಗಳನ್ನು ಮೀರಿ ಆಶಯಗಳನ್ನು ಅನುವಾದಿಸುವಲ್ಲಿ ಯಶಸ್ವಿಯಾಗಿದ್ದಾರೆ.