ಜಿಲ್ಲೆ

ಮೈಸೂರು ಬಂದ್ : ಕೆಲಸದಿಂದ ಹೊರಗುಳಿದು ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು

ಸದೇಶ್ ಕಾರ್ಮಾಡ್

ಮೈಸೂರು: ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್‌ಗೆ ಬೆಂಬಲ ಸೂಚಿಸಿ ಪೌರ ಕಾರ್ಮಿಕರು ಕೆಲಸದಿಂದ ಹೊರಗುಳಿದರು.

ಪೌರ ಕಾರ್ಮಿಕರು ಮಂಗಳವಾರ ಕೆಲಸದಿಂದ ಹೊರಗುಳಿದು ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹೀಗಾಗಿ ಪೌರ ಕಾರ್ಮಿಕರು ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಿಸಲು ತೆರಳಲಿಲ್ಲ. ನಗರ ಪಾಲಿಕೆ ಎದುರು ಅಮಿತ್ ಷಾ ಅವರ ಅಣಕು ಶವಯಾತ್ರೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ರಾಜ್ಯ ಸಫಾಯಿ ಕರ್ಮಚಾರಿ ಆಯೋಗಗಳ ಮಾಜಿ ಅಧ್ಯಕ್ಷ ನಾರಾಯಣ್, ಅಂಬೇಡ್ಕರ್ ದಲಿತರು, ಶೋಷಿತರ ಆರಾಧ್ಯದೈವ. ಅವರ ಕುರಿತು ಅಮಿತ್‌ಷಾ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಯಾರು ಸಹ ಸಹಿಸಿಕೊಳ್ಳಲು ಆಗುವುದಿಲ್ಲ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.