ಜಿಲ್ಲೆ

ಮೈಸೂರು ದಸರಾ ಉತ್ಸವ: ಸೆ.22ರಂದು ರಾಷ್ಟ್ರಪತಿಗೆ ಆಹ್ವಾನ

ಮೈಸೂರು: ನಾಡಹಬ್ಬ ದಸರಾದ ಉದ್ಘಾಟಕರನ್ನಾಗಿ ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದ್ದು, ಸೆ.22 ರಂದು ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಅವರಿಗೆ ಅಧಿಕೃತವಾಗಿ ದಸರಾ ಉತ್ಸವಕ್ಕೆ ಆಹ್ವಾನ ನೀಡಲು ತೀರ್ಮಾನಿಸಲಾಗಿದೆ.

ಇದೇ ಸಂದರ್ಭ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಅವರನ್ನು ದಸರಾ ಮಹೋತ್ಸವಕ್ಕೆ ಆಹ್ವಾನಿಸಲಾಗುವುದು.

ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.