ಜಿಲ್ಲೆ

ರೈತರ ಆತ್ಮಹತ್ಯೆ ಪ್ರಕರಣದ ಅರ್ಜಿ ಶೀಘ್ರ ವಿಲೇವಾರಿಗೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ

ಮೈಸೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಸರ್ಕಾರಿ ಭೂಮಿ ಮಂಜೂರಾತಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕಂದಾಯ ಇಲಾಖೆಯ ವಿವಿಧ ಸೇವೆಗಳಾದ ಬೆಳೆ ಪರಿಹಾರ, ಮಳೆಹಾನಿ, ಆಧಾರ್ ಸೀಡಿಂಗ್, ಲ್ಯಾಂಡ್ ಬೀಟ್, ಕಂದಾಯ ಗ್ರಾಮ ರಚನೆ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಪೋಡಿ ಪ್ರಕರಣಗಳು ಹಾಗೂ ರೈತರ ಆತ್ಮಹತ್ಯೆ ಪ್ರಕರಣಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡಬೇಕು. 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರ ಮತ್ತು ರೈತರ ಅಗತ್ಯತೆಗೆ ಅನುಗುಣವಾಗಿ ಎಲ್ಲ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.