ಜಿಲ್ಲೆ

ಮೈಸೂರು ವಿಭಾಗಮಟ್ಟದ ವಾಲಿಬಾಲ್

ಸೌಮ್ಯ ಆರ್

ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಪಂ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿವೇಕಾನಂದ ವಿದ್ಯಾವರ್ಧಕ ಸಂ, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಹಾಗೂ ಮುಂಡಾಜೆ ಪ್ರೌಢಶಾಲೆ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು. ರೋಟರಿ ಕ್ಲಬ್ ಬೆಳ್ತಂಗಡಿ ಘಟಕದ ನಿಕಟಪೂರ್ವ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭಹಾರೈಸಿದರು. ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ್ ಬಂಗೇರ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್ ಎಂ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ರಾಜ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಜಯರಾಜ್ ಜೈನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿರಾಜ್ ಗೌಡ, ರಮೇಶ್, ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಕೋಶಾಧಿಕಾರಿ ಡಾ.ರವಿ ಎಂ.ಎನ್., ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಂತಿ ಟಿ., ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ.ಎಸ್., ಪ.ಪೂ. ಕಾಲೇಜು ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಚಂದ್ರಮತಿ ಮೊದಲಾದವರಿದ್ದರು.

ವಾಲಿಬಾಲ್ ಆಟಗಾರ್ತಿ ಯಕ್ಷಿತಾ ಅವರು ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿದರು. ಅಜಿತ್ ಕುಮಾರ್ ಜೈನ್ ಕೊಕ್ರಾಡಿ ನಿರೂಪಿಸಿದರು. ಕೃಷ್ಣಾನಂದ ರಾವ್ ವಂದಿಸಿದರು.