ಜಿಲ್ಲೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ: ಬಿಗಿ ಬಂದೋಬಸ್ತ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಜೂ.4ರಂದು ಮೈಸೂರಿನ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದೆ

ಮತ ಎಣಿಕೆ ಕೇಂದ್ರ ಸುತ್ತಲು ಪ್ರತ್ಯೇಕ ಕಾರ್ಯಯೋಜನೆ ಮೂಲಕ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ತಿಳಿಸಿದರು.

ಮತ ಎಣಿಕೆ ಕೇಂದ್ರದ ಸುತ್ತಲು ಏಪ್ರಿಲ್ 26ರಿಂದ ಈಗಾಗಲೇ ಮೂರು ಹಂತದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 1ನೇ ಹಂತದಲ್ಲಿ ಸಿಎಪಿಎಫ್ ತುಕಡಿಯಿಂದ, 2ನೇ ಹಂತದಲ್ಲಿ ಸಶಸ್ತ್ರ ಮೀಸಲು ಪಡೆ, 3ನೇ ಹಂತದಲ್ಲಿ ಸ್ಥಳೀಯ ಪೊಲೀಸರಿಂದ ಭದ್ರತೆ ಕಲ್ಪಿಸಲಾಗಿದೆ. ಜತೆಗೆ, ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ ಎಂದರು.


ಈ ಕೇಂದ್ರದ ಮಂಭಾಗ, ಪ್ರವೇಶದ್ವಾರ, ಹಿಂಭಾಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ವಿವಿಧ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದರು.


ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್‌ನಿಂದ ಕಲಾಮಂದಿರ ಜಂಕ್ಷನ್‌ವರೆಗೆ ವಾಹನಗಳ ಪ್ರವೇಶ ನಿರ್ಬಂಧಿಸಿದ್ದು, ಬಸ್ ಸೇರಿದಂತೆ ಇತರ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲಾಗುವುದು. 3 ಡಿವೈಎಸ್‌ಪಿಗಳು, 167 ಇನ್‌ಸ್ಪೆಕ್ಟರ್‌ಗಳು, 750 ಕಾನ್‌ಸ್ಟೆಬಲ್, 8 ವಿವಿಧ ತುಕಡಿಗಳು, 2 ಕಮಾಂಡೋ ಪಡೆಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದರು.