ಜಿಲ್ಲೆ

ಮೈಸೂರು ತಾಲೂಕು ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟಕ್ಕೆ ಚಾಲನೆ

Mysuru

ಮೈಸೂರು: ಹೂಟಗಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ಮೈಸೂರು ತಾಲೂಕು ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟಕ್ಕೆ ಅಂತಾರಾಷ್ಟ್ರೀಯ ಹಾಕಿ ಪಟು ಬಿ.ಜಿ. ಹೇಮಲತಾ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಚಾಲನೆ ನೀಡಿದರು.

ಬಿ.ಜಿ. ಹೇಮಲತಾ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ನಮ್ಮ ದೈಹಿಕ ಸಾಮರ್ಥ್ಯ ಉತ್ತಮಗೊಳ್ಳುತ್ತದೆ ಎಂದರು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಶ್ವರಿ, ಹೂಟಗಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸಂಗೀತಾ ಭಟ್, ತಾಲೂಕು ದೈಹಿಕ ಪರಿವೀಕ್ಷಕ ಡಾ. ಗಣೇಶ್ ಕುಮಾರ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮುರುಳಿ ಹಾಗೂ ಇತರರು ಹಾಜರಿದ್ದರು.