suicide 
ಜಿಲ್ಲೆ

ಮೈಸೂರಿನ ಟೆರೆಷಿಯನ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ನಗರದ ಟೆರೆಷಿಯನ್ ಕಾಲೇಜು ವಿದ್ಯಾರ್ಥಿ ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ, ಚಾಮರಾಜನಗರದ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಜಯರಾಜ್ - ಶಾಂತಿ ದಂಪತಿ ಪುತ್ರಿ ಶಾಕೀನಾ(19) ಮೃತರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶಕೀನಾ ಬೆಳಗ್ಗೆ 8.30ಕ್ಕೆ ಕಾಲೇಜಿನಲ್ಲಿ ಪರೀಕ್ಷೆಗೆ ತೆರಳಿ ನಂತರ ಕಾಲೇಜು ಆವರಣದಲ್ಲಿರುವ ವಿದ್ಯಾರ್ಥಿ ನಿಲಯದ ಕೊಠಡಿಗೆ ಅಗಮಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.