ಮೈಸೂರು: ಮೈಸೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಗಗನ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ವಿದ್ಯಾಲಯದ ಕ್ರೀಡಾ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.
ವೆಂಕಟೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸೆ.9 ರಂದು ಗಗನ್ ನಗರದ ಕ್ರಾಫರ್ಡ್ ಭವನದಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರು. ಗಗನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.