ಮೈಸೂರು: ದೇಶದ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯಕ್ಕೀಗ 100ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮ.
ಅ.19ರ ಬೆಳಗ್ಗೆ 11ಕ್ಕೆ ವರ್ಚುವಲ್ ಮೂಲಕ ಕ್ರಾಫರ್ಡ್ ಭವನದಲ್ಲಿ ಘಟಿಕೋತ್ಸವ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆನ್ಲೈನ್ ಮೂಲಕವೇ ಘಟಿಕೋತ್ಸವ ಭಾಷಣ ಮಾಡಲಿದ್ದು, ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಪಾಲ್ಗೊಳ್ಳಲಿದ್ದಾರೆ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.