ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿಕೆರೆ ಸುತ್ತಲಿನ 50 ಮೀಟರ್ ಸುತ್ತಳತೆ ವ್ಯಾಪ್ತಿಯ ಪ್ರದೇಶವನ್ನು ನಿಶ್ಯಬ್ಧ ವಲಯ ಎಂದು ಪರಿಗಣಿಸಲಾಗಿದೆ.
ಈ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವ ಶಬ್ಧ, ಧ್ವನಿವರ್ಧಕಗಳ ಹಾಗೂ ವಾಹನಗಳ ಹಾರ್ನ್ ಶಬ್ಧಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.