ಮಂಡ್ಯ: ಜಿಲ್ಲೆಯ ಜೀವನಾಡಿ ಮೈಶುಗರ್ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಸಚಿವರು ಚಾಲನೆ ನೀಡಿದ್ದರು. ಅಂತೆಯೇ ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ಹಿನ್ನೆಲೆಯಲ್ಲಿ ಭೇಟಿ ನೀಡಿದ ಡಿಸಿ, ಸಿಎಂ ಆಗಮಿಸುವ ದಿನ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಉಪಸ್ಥಿತರಿದ್ದರು