ಅಪರಾಧ 
ಮೈಸೂರು

ಕೇಂದ್ರ ಕಾರಾಗೃಹದಲ್ಲಿ 19 ಮೊಬೈಲ್ ಪತ್ತೆ

ಅವಿನಾಶ್ ಜೈನಹಳ್ಳಿ
ಮೈಸೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ 19 ಮೊಬೈಲ್ಗಳು ಪತ್ತೆಯಾಗಿವೆ. ಜತೆಗೆ 11 ಸಿಮ್ ಕಾರ್ಡ್, 2 ಚಾರ್ಜರ್ ಮತ್ತು 1 ಚಾರ್ಜಿಂಗ್ ಕೇಬಲ್ ಸಿಕ್ಕಿದೆ.
ಕಾರಾಗೃಹದ ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಮಂಗಳವಾರ ರಾತ್ರಿ ಕಾರಾಗೃಹದ ವಿವಿಧ ವಿಭಾಗಗಳಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಇದ್ದ ವಸ್ತುಗಳು ಪತ್ತೆಯಾಗಿವೆ.
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ವಿ.ಶೇಷುಮೂರ್ತಿ ತಿಳಿಸಿದ್ದಾರೆ. ಅನಿರೀಕ್ಷಿತವಾಗಿ ಕಾರಾಗೃಹಕ್ಕೆ ಭೇಟಿ ನೀಡಿದ ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್‌ಕುಮಾರ್ ಅವರು ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಯ ಕರ್ತವ್ಯ ಶ್ಲಾಘಿಸಿ, 30 ಸಾವಿರ ರೂ. ನಗದು ಬಹುಮಾನ ಘೋಷಿಸಿದ್ದಾರೆ.