ಮೂಗೂರಿನ ಅಂಬೇಡ್ಕರ್ ಬಡಾವಣೆಯ ನಿವಾಸಿಗಳು ಹಾಗೂ ವಿದ್ಯಾರ್ಥಿ ಸಮೂಹ ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಅಂಗವಾಗಿ ಭಾನುವಾರ ಸಂಜೆ ಅದ್ದೂರಿ ಮೆರವಣಿಗೆ ಆಯೋಜಿಸಲಾಗಿತ್ತು.
ಮೂಗೂರು: ಮೂಗೂರಿನ ಅಂಬೇಡ್ಕರ್ ಬಡಾವಣೆಯ ನಿವಾಸಿಗಳು ಹಾಗೂ ವಿದ್ಯಾರ್ಥಿ ಸಮೂಹ ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಅಂಗವಾಗಿ ಭಾನುವಾರ ಸಂಜೆ ಅದ್ದೂರಿ ಮೆರವಣಿಗೆ ಆಯೋಜಿಸಲಾಗಿತ್ತು.
ಅಂಬೇಡ್ಕರ್ ಸಮುದಾಯ ಭವನದ ಬಳಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬಳಿಕ ವಿವಿಧ ಬಗೆಯ ಹೂವಿನಿಂದ ಅಲಂಕರಿಸಿದ ಅಂಬೇಡ್ಕರ್ ಅವರ ಭಾವಚಿತ್ರವನ್ನು ರಥದಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಯುವಕರು ಪಟಾಕಿ ಸಿಡಿಸಿ ವಾದ್ಯ ಹಾಗೂ ತಮಟೆ ತಂಡದವರ ತಾಳಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಇದಕ್ಕೂ ಮುನ್ನ ಗ್ರಾಮದ ಮಂಟೇಸ್ವಾಮಿ ಗದ್ದುಗೆಯ ಬಳಿ ಯುವಕ ಸಂಘದ ಪದಾಧಿಕಾರಿಗಳು ಅನ್ನಸಂತರ್ಪಣೆ ಮಾಡಿದರು. ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಇದ್ದರು.