ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಆರ್ಯನ್ ಗಂಧದಗುಡಿ ಏಕಾಂಗಿ ಪ್ರತಿಭಟನೆ ನಡೆಸಿದರು. 
ಮೈಸೂರು

ಅತ್ಯಾಚಾರ ಖಂಡಿಸಿ ಏಕಾಂಗಿ ಪ್ರತಿಭಟನೆ

ರಾಜಸ್ಥಾನದ ಗಂಗಾನಗರದಲ್ಲಿ 13 ವರ್ಷದ ಅಪ್ರಾಪ್ತೆ ಮೇಲೆ ನಡೆದಿರುವ ಅಮಾನವೀಯ ಸಾಮೂಹಿಕ ಅತ್ಯಾಚಾರ ಖಂಡಿಸಿ, ಗಂಧದಗುಡಿ ಫೌಂಡೇಷನ್ ಅಧ್ಯಕ್ಷ ಆರ್ಯನ್ ಗಂಧದಗುಡಿ ಸೋಮವಾರ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯಗಳು ದಿನೇ ದಿನೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ.
ರಾಜಸ್ಥಾನದ ಗಂಗಾ ನಗರದಲ್ಲಿ ಇತ್ತೀಚೆಗೆ ನಡೆದ ಈ ಕ್ರೂರ ಘಟನೆಯ ಆರೋಪಿಗಳಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.