ವರುಣ ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಜನರ ಸಮಸ್ಯೆಗಳನ್ನು ಆಲಿಸಿದರು.
ಮೈಸೂರು: ವರುಣ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಣ್ಣನೀರಾವರಿ ಇಲಾಖೆಯಿಂದ ಅಭಿವೃದ್ಧಿಗೊಳಿ ಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವರುಣ ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆಜ್ಜಗನಹಳ್ಳಿ, ಹಾರೋಪುರ, ಸಾಲುಂಡಿ, ಇಗ್ಲಿ ತಾಯೂರು ಗ್ರಾಮಗಳಲ್ಲಿ ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.
ಗೆಜ್ಜಗನಹಳ್ಳಿಯಲ್ಲಿ ಬಸ್ ನಿಲುಗಡೆ, ನಾಲೆಗಳ ಅಭಿವೃದ್ಧಿ, ಚರಂಡಿ ಸ್ವಚ್ಛಗೊಳಿಸುವುದು, ಹಾರೋಪುರ ಗ್ರಾಮದ ರಸ್ತೆ ಅಭಿವೃದ್ಧಿ, ಕೆರೆ ಅಭಿವೃದ್ಧಿ, ದೇವಸ್ಥಾನಕ್ಕೆ ತಡೆಗೋಡೆ, ಸ್ಮಶಾನಕ್ಕೆ ಜಾಗ ಬೇಕು ಎಂದು ಗ್ರಾಮಸ್ಥರು ಬೇಡಿಕೆ ಇಟ್ಟರು. ಗ್ರಾಮಸ್ಥರ ಬೇಡಿಕೆಗಳ ಕುರಿತು ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಈಡೇರಿಸಲಾಗುವುದು ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಜತೆಗೆ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿರುವುದನ್ನು ಸಹಿಸದ ಬಿಜೆಪಿ, ಜೆಡಿಎಸ್‌ನವರು ಸುಳ್ಳು ಆರೋಪಗಳನ್ನು ಮಾಡುತ್ತಾ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ರಂಗಸ್ವಾಮಿ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್. ವಿಜಯ್, ಮುಖಂಡರಾದ ಮಣಿಯಯ್ಯ, ಕಲ್ಮಳ್ಳಿ ಬಾಬು, ಚಿನ್ನಂಬಳ್ಳಿ ರಾಜು, ಜಿ.ಡಿ. ವಿಠಲ್, ತಾಯೂರು ಬಸವರಾಜು, ರಾಜೇಶ್, ಶಿವಣ್ಣ, ಕುಮಾರ್, ನಾಗರಾಜ್ ಇದ್ದರು.