ಸಚಿವ ಡಾ.ಯತೀಂದ್ರ  
ಮೈಸೂರು

ಅನಧಿಕೃತ ರೆಸ್ಟೋಬಾರ್‌ಗಳ ವಿರುದ್ಧ ಕ್ರಮ : ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರದಲ್ಲಿ ಇರುವ ಅನಧಿಕೃತ ರೆಸ್ಟೋಬಾರ್‌ಗಳ ಮೇಲೆ ದಾಳಿ ಮಾಡಿ ಪರಿಶೀಲಿಸುವ ಕಾರ್ಯ ಮುಂದುವರಿದೆ. ಮಾರಾ ರೆಸ್ಟೋಬಾರ್ ಮಾಲೀಕರಿಗೆ ಜಾಮೀನು ದೊರೆತಿರುವ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ನಗರಾಭಿವೃದ್ದಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಚಾಮುಂಡಿಬೆಟ್ಟದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮಾರಾ ರೆಸ್ಟೋಬಾರ್ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ಕಾರಿ ಇಲಾಖೆ ಡಿಸಿ ಅಮಾನತುಪಡಿಸಿ ತನಿಖೆ ನಡೆಯುತ್ತಿದೆ. ಅದೇ ರೀತಿ ಪರವಾನಗಿ ಇಲ್ಲದೆ ನಡೆಸುತ್ತಿರುವ ಪಬ್,ರೆಸ್ಟೋಬಾರ್‌ಗಳ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ. ಈಗಾಗಲೇ ಹಲವು ರೆಸ್ಟೋಬಾರ್‌ಗಳನ್ನು ಮುಚ್ಚಿಸಲಾಗಿದೆ ಎಂದರು.
ಕೃಷ್ಣರಾಜಸಾಗರ, ಕಬಿನಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಮಳೆ ಬಾರದಿದ್ದರೆ ನೀರಿನ ಸಮಸ್ಯೆ ನಿವಾರಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ ಎಂದು ಹೇಳಿದರು.