ಮೈಸೂರು ನಗರದ ಹೊರವಲಯದ ವಿಷ್ಣು ಸ್ಮಾರಕ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ ವಾರ್ಷಿಕೋತ್ಸವ ಸಮಾರಂಭವನ್ನು ನಟಿ ಭಾರತಿ ವಿಷ್ಣುವರ್ಧನ್ ಉದ್ಘಾಟಿಸಿದರು. ಮಾ.ವಿ. ರಾಮಪ್ರಸಾದ್, ಡಾ.ಎಂ.ಬಿ. ಅನಂತಮೂರ್ತಿ, ಡಾ.ಬಿ.ಎನ್.ಮಹೇಶ್ ಕುಮಾರ್, ಡಾ.ಶ್ರೀನಿವಾಸ್‌ಮೂರ್ತಿ ಹಾಗೂ ಇತರರು ಇದ್ದರು. 
ಮೈಸೂರು

ಪುರೋಹಿತರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ನಟಿ ಭಾರತಿ ವಿಷ್ಣುವರ್ಧನ್

ಮೈಸೂರು: ನಗರದ ಹೊರವಲಯದ ಉದ್ಬೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕ ಭವನದಲ್ಲಿ ಮಂಗಳವಾರ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು.
ಸಮಾರಂಭ ಉದ್ಘಾಟಿಸಿದ ನಟಿ ಭಾರತಿ ವಿಷ್ಣುವರ್ಧನ್ ಮಾತನಾಡಿ, ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ಸಂತೋಷ ಉಂಟು ಮಾಡಿದೆ. ದೇವರ ಸೇವೆ ಮಾಡುವವರು, ದೇಶದ ಸುಭಿಕ್ಷೆ ಬಯಸುವ ನಿಮಗೆಲ್ಲರಿಗು ದೇವರ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸಿದರು
ನಗರ ಪಾಲಿಕೆ ಮಾಜಿ ಸದಸ್ಯ ಮಾ.ವಿ. ರಾಮಪ್ರಸಾದ್ ಮಾತನಾಡಿ, ಅಸಂಘಟಿತ ಪುರೋಹಿತ ಕಾರ್ಮಿಕರಿಗೆ ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪ್ರತಿಯೊಬ್ಬರಿಗೂ ತಲುಪಬೇಕು. ಸಂಘಟನೆ ಇನ್ನೂ ಹೆಚ್ಚು ಬಲಿಷ್ಠವಾಗಿ ಬೆಳೆಯಲಿ ಎಂದರು.
ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಬಿ. ಅನಂತಮೂರ್ತಿ, ಪ್ರಧಾನ ಕಾರ್ಯದರ್ಶಿ ಡಾ.ಬಿ.ಎನ್.ಮಹೇಶ್ ಕುಮಾರ್, ರಾಜ್ಯಾಧ್ಯಕ್ಷ ಡಾ.ಶ್ರೀನಿವಾಸ್‌ಮೂರ್ತಿ, ರಾಜ್ಯ ಉಪಾಧ್ಯಕ್ಷ ಡಾ.ಸತೀಶ್ ಸಿಂಹ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ ಡಾ. ಲಕ್ಷ್ಮೀದೇವಿ, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹಾಗೂ ಇತರರು ಇದ್ದರು.