ಸರಗೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕವಾದ ಬಡಗಲಪುರ ಗಂಗಾಧರ್ ಅವರನ್ನು ಅಭಿನಂದಿಸಲಾಯಿತು. ಪ್ರಕಾಶ್, ರಾಜೇಶ್, ರವಿ ಇದ್ದರು. 
ಮೈಸೂರು

ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಡಗಲಪುರ ಗಂಗಾಧರ್ ನೇಮಕ

ಲಲಾಟಾಕ್ಷ ಎಸ್
ಸರಗೂರು: ಸರಗೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಡಗಲಪುರ ಗಂಗಾಧರ್ ನೇಮಕವಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರ ಆದೇಶ ಮೇರೆಗೆ ನೇಮಕ ಮಾಡಲಾಗಿದ್ದು ಇತ್ತೀಚೆಗೆ ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ರವಿ ಪಿ.ಮಾನವಿನಹಳ್ಳಿ ಹಾಗೂ ಪಕ್ಷದ ಮುಖಂಡರು ಸಮಿತಿಯ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಬಳಿಕ ಬಡಗಲಪುರ ಗಂಗಾಧರ್ ಮಾತನಾಡಿ, ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ರಾಜಕೀಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು ಅವರು ನಮ್ಮಂತ ಕಾರ್ಯಕರ್ತರಿಗೆ ಸ್ಥಾನ ಕೊಡಿಸಿದ್ದಾರೆ. ಪಕ್ಷದ ನಿಲುವು ಹಾಗೂ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಚಾರ ಸಮಿತಿ ಕೆಲಸ. ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿ ತಳಮಟ್ಟದಿಂದ ಪಕ್ಷ ಬಲಪಡಿಸಬೇಕು ಎಂದು ಹೇಳಿದರು.
ಬೂತ್ ಮಟ್ಟದಿಂದ ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ಗ್ರಾಮಾಂತರ ಮಟ್ಟದಲ್ಲಿ ರಾಜ್ಯ ಸರ್ಕಾರದ ಯೋಜನೆ, ಸಂವಿಧಾನ ಬಗ್ಗೆ ಅರಿವು ಮೂಡಿಸಬೇಕು. ಮುಂಬರುವ ಎಲ್ಲ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ತಿಳಿಸಿದರು.
ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಶಿವರಾಜು, ಮುಖಂಡರಾದ ರವಿ, ರಾಜೇಶ್, ರಮೇಶ್, ಕೆಂಪಸಿದ್ದ, ಮಹದೇವಸ್ವಾಮಿ ಇದ್ದರು.