ಸೋಸಲೆ ಗ್ರಾಮದ ಸರ್ಕಾರಿ ಆದರ್ಶ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನಾಗರಾಜಯ್ಯ ಉದ್ಘಾಟಿಸಿದರು. ಎಸ್.ಸಿ.ಶಿವಮೂರ್ತಿ, ಎಂ.ವಿ. ಶಿವಶಂಕರಮೂರ್ತಿ, ನಾಗೇಶ್, ಬಸವರಾಜು, ರಮೇಶ್, ಬಡ್ಡು ಶಿವಕುಮಾರ್, ಮಂಜುನಾಥ್ ಇತರರು ಇದ್ದರು.
- ಶಾಲಾ ಶಿಕ್ಷಣ ಇಲಾಖೆಯ ಅಭಿವೃದ್ಧಿ ವಿಭಾಗದ ಉಪ ನಿರ್ದೇಶಕ
- ಡಯಟ್ ಪ್ರಾಂಶುಪಾಲ ನಾಗರಾಜ
ತಿ.ನರಸೀಪುರ: ಕಲೆ ಮತ್ತು ಪ್ರತಿಭೆಗೆ ವಿದ್ಯಾರ್ಥಿಗಳನ್ನು ಬದಲಾವಣೆ ಮಾಡುವ ಶಕ್ತಿಯಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಅಭಿವೃದ್ಧಿ ವಿಭಾಗದ ಉಪ ನಿರ್ದೇಶಕ ಹಾಗೂ ಡಯಟ್ ಪ್ರಾಂಶುಪಾಲ ನಾಗರಾಜಯ್ಯ ಹೇಳಿದರು.
ತಾಲೂಕಿನ ಸೋಸಲೆ ಗ್ರಾಮದ ಬಳಿಯಿರುವ ಕೇಂದ್ರ ಪುರಸ್ಕೃತ ಯೋಜನೆಯ ಸರ್ಕಾರಿ ಆದರ್ಶ ಶಾಲೆಯಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಲೆ, ಸಾಹಿತ್ಯ, ನಾಟಕ, ವಿವಿಧ ವೇಷಭೂಷಣ ಸ್ವರ್ಧೆ ಸೇರಿದಂತೆ ದಶಕಗಳಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾ ಗುತ್ತಿದೆ. ವಿಕಾಸ ಬೆಳವಣಿಗೆಯಿಂದ ಮೊದಲ ವಿದ್ಯಾರ್ಥಿಗಳಿಗೂ ಈಗಿನ ಮಕ್ಕಳ ಪ್ರತಿಭೆಗೂ ವ್ಯತ್ಯಾಸವಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಬದಲಾವಣೆ ಶಕ್ತಿ ಹೆಚ್ಚಾಗಿದೆ ಎಂದರು.
ಶಿಕ್ಷಣ ಇಲಾಖೆ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಪ್ರತಿಭೆಯನ್ನು ಹೊರ ತೆಗೆಯುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ಬಾಲ್ಯದಿಂದಲೇ ಕಲಿಕೆ ರೂಪಿಸುವುದರಿಂದ ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯ. ಸರ್ಕಾರ ಮಕ್ಕಳ ಪ್ರತಿಭೆಗೆ ಅನೇಕ ಕಾರ್ಯಕ್ರಮವನ್ನು ರೂಪಿಸಿ, ಅವರಲ್ಲಿರುವ ಪ್ರತಿಭೆ ಗುರುತಿಸಲು ಅನನ್ಯ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ಮಾತನಾಡಿ, ಪ್ರತಿಭೆ ಪ್ರತಿಯೊಬ್ಬರಲ್ಲೂ ಅಡಕವಾಗಿದೆ. ಅದನ್ನು ಹೊರ ತರಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಆಯೋಜಿಸಿದೆ ಎಂದ ಅವರು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಇದು ಸೂಕ್ತ ವೇದಿಕೆ. ಹಾಗಾಗಿ ಇದನ್ನು ಸದುಪಯೋಗ ಪಡಿಸಿಕೊಳ್ಳವ ಮೂಲಕ ಮಕ್ಕಳು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಬೇಕೆಂದು ಸಲಹೆ ನೀಡಿದರು.
ಆದರ್ಶ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೋಮು(ದಾದ), ಶಿವಕುಮಾರ್(ಬಡ್ಡು), ಮಾಜಿ ಅಧ್ಯಕ್ಷ ಎಚ್.ಅಣ್ಣಯ್ಯಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ, ನಾಗೇಶ್, ಬಸವರಾಜು, ರಮೇಶ್, ಮಂಜುನಾಥ್ ಇತರರಿದ್ದರು.