ಕೆ.ಆರ್.ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಡಿ.ರವಿಶಂಕರ್ ಮಾತನಾಡಿದರು. ಜಿ.ಸುರೇಂದ್ರಮೂರ್ತಿ, ರುಕೀಯ ಬೇಗಂ, ಕುಲದೀಪ್, ಎಸ್.ರವಿ ಇತರರಿದ್ದರು.
ಕೆ.ಆರ್.ನಗರ : ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮ ಜಯಂತಿಯನ್ನು ಏ.5 ರಂದು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಸೋಮವಾರ ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಪುರಸಭೆಯ ಆವರಣದಲ್ಲಿ ಇರುವ ಪುತ್ಥಳಿ ಬಳಿ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಯಿತು.
ಶಾಸಕ ಡಿ.ರವಿಶಂಕರ್ ಮಾತನಾಡಿ, ಎಲ್ಲ ಸಮಾಜದ ಮುಖಂಡರನ್ನು ಆಹ್ವಾನಿಸಿ ಏ.5 ರಂದು ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ ಮಾಡಲಾಗುತ್ತದೆ. ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಂಬಂಧ ಮತ್ತೊಂದು ಸಭೆ ನಡೆಸಲಾಗುತ್ತದೆ . ಅದರಲ್ಲಿ ತಾವುಗಳೆಲ್ಲರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದರು.
ಕೆ.ಆರ್.ನಗರ ಪಟ್ಟಣದ ಬಾಬೂಜಿ ಪ್ರತಿಮೆ ಬಳಿ ಹಾಗೂ ಸಾಲಿಗ್ರಾಮ ತಾಲೂಕಿನ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಬಾಬು ಜಗಜೀವನರಾಮ್ ಜಯಂತಿಯನ್ನು ಆಚರಿಸುವಂತೆ ತಹಸೀಲ್ದಾರ್ ಅವರಿಗೆ ಸೂಚಿಸಿದರು. ಎರಡು ಪ್ರತಿಮೆಗೆ ವಿದ್ಯುತ್ ಅಲಂಕಾರ, ಹೂವಿನ ಅಲಂಕಾರ, ಸ್ಟೇಜ್ ನಿರ್ಮಾಣ ಅಲ್ಲದೆ ನೆರೆದವರಿಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡುವ ಜತೆಗೆ ಯಾವುದೆ ಲೋಪದೋಷಗಳಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ ಅವರಿಗೆ ಸೂಚಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಂ.ಎಸ್.ಮಹದೇವ್, ಆದಿಜಾಂಬವ ಸಂಘದ ಅಧ್ಯಕ್ಷ ಲೋಕೇಶ್, ದಸಂಸ ತಾಲೂಕು ಸಂಚಾಲಕ ಎಂ.ಎಸ್.ಮಲ್ಲೇಶ್, ಸೇವಾದಳದ ತಾಲೂಕು ಅಧ್ಯಕ್ಷ ಬಿ.ಎಚ್.ಕುಮಾರ್,ಗ್ರಾ.ಪಂ. ಮಾಜಿ ಸದಸ್ಯ ಎಚ್.ಎಂ.ಮಂಜು, ಮುಖಂಡರಾದ ಕಂಟ್ರಾೃಕ್ಟರ್ ಕುಮಾರ್, ಕಾಳಯ್ಯ, ರಮೇಶ್, ತಹಸೀಲ್ದಾರ್‌ಗಳಾದ ಜಿ.ಸುರೇಂದ್ರಮೂರ್ತಿ, ರುಕೀಯ ಬೇಗಂ, ತಾಪಂ ಇಒ ಗಳಾದ ಕುಲದೀಪ್, ಎಸ್.ರವಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ನಿರ್ದೇರ್ಶಕ ಸೈಯದ್ ಜಾಬೀರ್, ಎಂಎಸ್‌ಎಸ್ ತಾಲೂಕು ಅಧ್ಯಕ್ಷ ಎಂ.ಎಸ್.ರವಿಕುಮಾರ್, ಸಾಲಿಗ್ರಾಮ ತಾಲೂಕು ದಸಂಸ ಅಧ್ಯಕ್ಷ ಮುಂಡೂರು ಶಿವು, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಎಂ.ಎಸ್.ನಂಜುಂಡಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.