ಬನ್ನಿಕುಪ್ಪೆ ಗ್ರಾಮದ ಗ್ರಾಮದೇವತೆ ಶ್ರೀ ಬನ್ನಮ್ಮ ಹಾಗೂ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಾರಿಗುಡಿ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಡಿವೈಎಸ್ಪಿ ರವಿ ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್ ಪುನೀತ್, ಇನ್‌ಸ್ಪೆಕ್ಟರ್ ಲಕ್ಷ್ಮೀ ಹಾಗೂ ಗ್ರಾಮಸ್ಥರು ಇದ್ದರು.
ಬನ್ನಿಕುಪ್ಪೆ: ಇಲ್ಲಿನ ಗ್ರಾಮದೇವತೆ ಶ್ರೀ ಬನ್ನಮ್ಮ ಹಾಗೂ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮಾ.11ರಿಂದ ಐದು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಮಾರಿಗುಡಿ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹುಣಸೂರು ಉಪವಿಭಾಗದ ಡಿವೈಎಸ್ಪಿ ರವಿ ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್ ಪುನೀತ್, ಇನ್‌ಸ್ಪೆಕ್ಟರ್ ಲಕ್ಷ್ಮೀ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು. ಜಾತ್ರೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಡಿವೈಎಸ್ಪಿ ರವಿ ತಿಳಿಸಿದರು.
ಬುಧವಾರ ಬೆಳಗ್ಗೆ 5.30ಕ್ಕೆ ಜಾತ್ರೆ ಚಾಲನೆ ನೀಡಲಾಗುವುದು. ಜಾತ್ರೆಗೆ ಬರುವ ಭಕ್ತರಿಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಸಲಹೆ ನೀಡಿದರು. ಸಭೆಯಲ್ಲಿ ಪಿಡಿಒ ರಾಘವೇಂದ್ರ ಪ್ರಸನ್ನ, ಕಾರ್ಯದರ್ಶಿ ವೇದಮೂರ್ತಿ, ಗ್ರಾಮದ ಮುಖಂಡರು, ಜನಪ್ರತಿನಿಧಿಗಳು ಹಾಜರಿದ್ದರು.