ಸರಗೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಶ್ರೀಷಡಕ್ಷರಿ ಸ್ವಾಮೀಜಿ, ಶ್ರೀತೋಂಟದಾರ್ಯ ಸ್ವಾಮೀಜಿ, ಚೈತ್ರಾಸ್ವಾಮಿ ಇತರರು ಇದ್ದರು. 
ಮೈಸೂರು

ಬಸವಣ್ಣ ಮಾನವಹಕ್ಕುಗಳ ಪ್ರತಿಪಾದಕ

ಲೋಕೇಶ್ ಮನು. ಡಿ
ಸರಗೂರು: ಮನುಷ್ಯನ ಉದ್ಧಾರಕ್ಕಾಗಿ ಶ್ರಮಿಸಿದ ಕಾಯಕಯೋಗಿ ಬಸವಣ್ಣ ಒಂದು ಜಾತಿಗೆ ಸಿಮೀತವಾಗಿಲ್ಲ. ಬದಲಿಗೆ ಮಾನವ ಹಕ್ಕುಗಳ ಪ್ರತಿಪಾದಕ ಎಂದು ದಡದಹಳ್ಳಿ ಮಠದ ಶ್ರೀಷಡಕ್ಷರಿ ಸ್ವಾಮೀಜಿ ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
12ನೇ ಶತಮಾನದಲ್ಲಿಯೇ ಸಮಾಜದ ಏಳಿಗೆಗಾಗಿ ಶ್ರಮಿಸಿದ ಬಸವಣ್ಣ ಅವರ ತತ್ವಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಭಕ್ತಿ ಭಂಡಾರಿ ಬಸವಣ್ಣಸಾಮಾಜಿಕ ಕಳಕಳಿಯುಳ್ಳವರು. ಅವರನ್ನು ಅನುಸರಿಸುವವರು ಕಡಿಮೆ. ಅನುಭವ ಮಂಟಪ ನಿರ್ಮಿಸಿಕೊಂಡು ಸಮ ಸಮಾಜಕ್ಕಾಗಿ ದುಡಿದವರು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರೆ ಸಾಲದು, ಅವರ ಚಿಂತನೆಗಳನ್ನು ಕಾರ್ಯಗತವಾಗುವಂತೆ ಮಾಡಬೇಕು ಎಂದು ತಿಳಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಕಾಟವಾಳು ವೀರಭದ್ರಪ್ಪ ಮಾತನಾಡಿ, ಮುಂದಿನ ಮೇ ತಿಂಗಳಿನಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಆದಿಕರ್ನಾಟಕ ಮಹಾ ಸಭಾ ತಾಲೂಕು ಅಧ್ಯಕ್ಷ ಇಟ್ನರಾಜಣ್ಣ, ತಹಸೀಲ್ದಾರ್ ಮೋಹನಕುಮಾರಿ, ಜೆಎಸ್‌ಎಸ್ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗಸ್ವಾಮಿ ಮಾತನಾಡಿದರು.
ಹಂಚೀಪುರ ಮಠದ ಶ್ರೀತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಾಸಭಾದ ತಾಲೂಕು ನಿರ್ದೇಶಕ ಬಾಡಗ ಮಾದಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರಾಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಸಣ್ಣತಾಯಮ್ಮ, ಶ್ರೀನಿವಾಸ್, ಚಲುವಕೃಷ್ಣ, ಜಿಪಂ ಮಾಜಿ ಸದಸ್ಯ ಕೆ.ಚಿಕ್ಕವೀರನಾಯಕ, ಬಿಜೆಪಿ ತಾಲೂಕು ಅಧ್ಯಕ್ಷ ಕಂದಲಿಕೆ ಗುರುಸ್ವಾಮಿ, ಕೋಶಾಧ್ಯಕ್ಷ ಸಿ.ಕೆ.ಗಿರೀಶ್, ತೆರಣಿಮುಂಟಿ ಗಿರೀಶ್, ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಬಸವ ಬಳಗದ ಅಧ್ಯಕ್ಷ ಹಂಚೀಪುರ ಗಣಪತಿ, ಬಾಡಗ ಮಾದಪ್ಪ, ಚಾಮಲಾಪುರ ಶಿವಕುಮಾರ್, ಮಂಜುನಾಥ್, ಪರಶಿವಮೂರ್ತಿ, ನಿಜಗುಣ, ತಾಪಂ ಇಒ ಪ್ರೇಮ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್‌ಕುಮಾರ್, ಉಪತಹಸೀಲ್ದಾರ್ ಸುನೀಲ್, ಕಸಾಪ ತಾಲೂಕು ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಸರಗೂರು ಸಣ್ಣಸ್ವಾಮಿ, ಗೋವಿಂದ, ಪುಟ್ಟಯ್ಯ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು. ಶಿವಪ್ಪ ಮುಳ್ಳೂರು ವಚನ ಗಾಯನ ಮಾಡಿದರು.