ಬೆಟ್ಟದಪುರ ಸಮೀಪದ ಭುವನಹಳ್ಳಿ ಗ್ರಾಮದ ಸೋಮೇಶ್ವರ ದೇವಾಲಯದ ಬಳಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕೆ.ಮಹದೇವ್ ಮಾತನಾಡಿದರು. ಅಣ್ಣಯ್ಯ ಶೆಟ್ಟಿ, ಶಿವಣ್ಣ, ಕುಮಾರ್, ಮಹೇಶ್, ಸತ್ಯಣ್ಣ, ರವಿ ಇತರರಿದ್ದರು. 
ಮೈಸೂರು

ರಾಜಕೀಯದಲ್ಲಿ ಏರಿಳಿತ ಸಹಜ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ಮಾಜಿ ಶಾಸಕ ಕೆ.ಮಹದೇವ್ ಅಭಿಪ್ರಾಯ
ಬೆಟ್ಟದಪುರ: ರಾಜಕೀಯದಲ್ಲಿ ಏರಿಳಿತಗಳು ಸಹಜ, ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವು ಜನರ ವಿಶ್ವಾಸಗಳಿಸಿ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಳ್ಳುತ್ತದೆ ಎಂದು ಮಾಜಿ ಶಾಸಕ ಕೆ.ಮಹದೇವ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಭುವನಹಳ್ಳಿಯ ಸೋಮೇಶ್ವರ ದೇವಾಲಯದ ಬಳಿ ಸೋಮವಾರ ಆಯೋಜಿಸಿದ್ದ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಸಕ್ರಿಯಗೊಳಿಸಿ ಇಂದಿನಿಂದಲೇ ಪಕ್ಷ ಬಲಪಡಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಪಂಚಾಯಿತಿ ಮಟ್ಟದಲ್ಲಿರುವ ಸಮಸ್ಯೆಗಳನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನದಟ್ಟು ಮಾಡಿ, ಆ ಸಮಸ್ಯೆ ಬಗೆಹರಿಸುವ ಕೆಲಸ ನಿರಂತರವಾಗಿ ಪಕ್ಷದ ಕಾರ್ಯಕರ್ತರು ಮಾಡುತ್ತಿರಬೇಕು. ಇದರಿಂದ ಜನಸಾಮಾನ್ಯರು ನಮ್ಮ ಪಕ್ಷದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಮಾಡುತ್ತಾರೆ ಎಂದರು.
ಇದೇ ವೇಳೆ ಹತ್ತಾರು ಕಾಂಗ್ರೆಸ್ ಕಾರ್ಯಕರ್ತರು ಕೆ.ಮಹದೇವ ನೇತೃತ್ವದಲ್ಲಿ ಸ್ವಇಚ್ಛೆಯಿಂದ ಜೆಡಿಎಸ್ ಸೇರ್ಪಡೆಗೊಂಡರು. ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಶಿವಣ್ಣ, ಕುಮಾರ್, ಮಹೇಶ್, ಸತ್ಯಣ್ಣ, ರವಿ, ಯೋಗಣ್ಣ, ಸತೀಶ್, ಧನಂಜಯ್, ಅನು, ಚಂದ್ರಶೇಖರ್, ನಾಗೇಂದ್ರ , ಕೂರ್ಗಲ್ ಶಿವಕುಮಾರ್ ಸ್ವಾಮಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.