ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮೈಸೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. 
ಮೈಸೂರು

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಸದೇಶ್ ಕಾರ್ಮಾಡ್
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಯುವಮೋರ್ಚಾ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ದೇಶಭಕ್ತರಾದ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಹೇಳುವ ಮೂಲಕ ಅವಮಾನ ಮಾಡಿರುವುದು ಖಂಡನೀಯ. ಖರ್ಗೆ ಅವರು ಕೂಡಲೇ ಕ್ಷಮೆಯಾಚಿಸದೆ ಇದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು.
ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಅರ್ಜುನ್ ಪಾರ್ಥ, ಪ್ರಮುಖರಾದ ಪರಿಕ್ಷಿತ್ ರಾಜ್ ಅಸ್, ಅನಿಲ್ ಕುಮಾರ್, ಸಚಿನ್ ಪ್ರವೀಣ್ ಹಾಗೂ ಇತರರು ಪಾಲ್ಗೊಂಡಿದ್ದರು.