ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಾಹಾರ ಸವಿದರು. 
ಮೈಸೂರು

ಮೈಲಾರಿ ಹೋಟೆಲ್‌ನಲ್ಲಿ ಉಪಾಹಾರ

ಅವಿನಾಶ್ ಜೈನಹಳ್ಳಿ
ಮೈಸೂರು: ಜನತಾದರ್ಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಾಹಾರ ಸವಿದರು. ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಮಸಾಲೆ ದೋಸೆ ಹಾಗೂ ಇಡ್ಲಿ ಸೇವಿಸಿದರು.
ಸಿದ್ದರಾಮಯ್ಯ ಅವರು ಪ್ರತಿ ಬಾರಿ ಮೈಸೂರಿಗೆ ಬಂದಾಗ ಬೆಣ್ಣೆ ದೋಸೆ, ಕಾಯಿ ಚಟ್ನಿ, ಆಲೂಗಡ್ಡೆ ಈರುಳ್ಳಿ ಪಲ್ಯ, ಇಡ್ಲಿ-ಚಟ್ನಿ ಸವಿಯುತ್ತಾರೆ. ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿಂದರೆ ಒಂಥರಾ ಸಮಾಧಾನ, ತೃಪ್ತಿ ಎಂದು ಈ ಹಿಂದೆ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಸಕ ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಇತರರು ಇದ್ದರು.