ಬನ್ನೂರಿನಲ್ಲಿ ್ಲ ಶನಿವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಮಾಜಿ ರೋಟರಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್‌ಕಾಳಪ್ಪ, ಕೆ.ರಾಜೇಶ್‌ಕುಮಾರ್, ವಿಜಯ್‌ಕುಮಾರ್, ವಿಜಯ್ ಆರ್ ದೊಡೆಜಾ, ಡಾ.ಹರಿ ಉತ್ತಮ್‌ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿಸಿದ್ದರು.
- ಮಾಜಿ ರೋಟರಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್‌ಕಾಳಪ್ಪ ಮಾಹಿತಿ
ಬನ್ನೂರು: ಅಂಧತ್ವದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರೂ ಕಣ್ಣಿನ ಉಚಿತ ತಪಾಸಣೆ ಶಿಬಿರವನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಜೀವನ ನಡೆಸಿ ಎಂದು ಮಾಜಿ ರೋಟರಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್‌ಕಾಳಪ್ಪ ತಿಳಿಸಿದರು.
ಪಟ್ಟಣದ ರೋಟರಿ ಸಂಸ್ಥೆ , ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ , ಲಯನ್ಸ್ ಕ್ಲಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಶನಿವಾರ ಉಚಿತ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ದೃಷ್ಟಿ ಹೀನರ ಸಂಖ್ಯೆ ಅಧಿಕವಾಗಿದ್ದು, ಅವರಿಗೆ ಅನುಕೂಲವಾಗಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಈ ಕಾರ್ಯಕ್ರಮಗಳನ್ನು 18 ವರ್ಷಗಳಿಂದ ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃ ಷ್ಟಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನಕ್ಕೆ ಇಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ವಿವಿಧ ಸ್ಥಳಗಳಿಂದ ಬಂದಿರುವಂತ ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ ಮಾಡಿ, ನಂತರ ಕಣ್ಣಿನ ಪೊರೆ ಇರುವವರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಆಯ್ಕೆಯಾದ ಶಿಬಿರಾರ್ಥಿಗಳನ್ನು ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರ ಚಿಕಿತ್ಸೆ ಮಾಡಿಸಿ ಪುನಃ ಸ್ವಸ್ಥಳಕ್ಕೆ ತಂದು ಬಿಡಲಾಗುವುದು ಎಂದು ತಿಳಿಸಿದರು.
ವಿವಿಧ ಗ್ರಾಮದಿಂದ ಸುಮಾರು 225ಕ್ಕು ಹೆಚ್ಚು ಶಿಬಿರಾರ್ಥಿಗಳು ಆಗಮಿಸಿ ಕಣ್ಣಿನ ತಪಾಸಣೆಗೆ ಮಾಡಿಸಿಕೊಂಡರು. ಲಯನ್ ಕೆ.ರಾಜೇಶ್‌ಕುಮಾರ್, ವಿಜಯ್‌ಕುಮಾರ್, ವಿಜಯ್ ಆರ್ ದೊಡೆಜಾ, ಡಾ.ಹರಿ ಉತ್ತಮ್‌ಕುಮಾರ್, ನಟರಾಜು, ಗುರುಚಕ್ರವರ್ತಿ, ನಂಜುಂಡಸ್ವಾಮಿ, ಮೂರ್ತಿ, ವನ್ಯರಾಜ್‌ಪುರೋಹಿತ, ವಿರಾಟ್ ರಾಜ್‌ಪುರೋಹಿತ್, ಸಂತೋಷ್‌ಕುಮಾರಿ, ಯಾಸೀನ್, ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿಸಿದ್ದರು.