ಮೈಸೂರು ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದಿಂದ ಬುಧವಾರ ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಯಿತು. ಡಾ. ರೇಚಣ್ಣ, ಸ್ವರ್ಣಲತಾ, ಡಾ. ಅಭಿಜಿತ್ ಎಂ. ಸಿಂಗ್ ಹಾಗೂ ಇತರರು ಇದ್ದರು. 
ಮೈಸೂರು

ಮೈಸೂರು ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ದಿನಾಚರಣೆ

ಮೈಸೂರು: ಕ್ಯಾನ್ಸರ್ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದಿಂದ ಬುಧವಾರ ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಯಿತು.
ಪ್ರಾಂಶುಪಾಲ ಡಾ. ರೇಚಣ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಯಾನ್ಸರ್ ಭಯಪಡಬೇಕಾದ ರೋಗವಲ್ಲ. ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಸಂಪೂರ್ಣ ಚಿಕಿತ್ಸೆ ಸಾಧ್ಯ. ಇಂದಿನ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಧೂಮಪಾನ-ಮದ್ಯಪಾನಗಳ ದುಷ್ಪರಿಣಾಮಗಳು ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಿದರು.
ಕ್ಯಾನ್ಸರ್ ರೋಗದ ಆರಂಭಿಕ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಮತ್ತು ನಿಯಮಿತ ಆರೋಗ್ಯ ತಪಾಸಣೆ ಹಾಗೂ ವಿದ್ಯಾರ್ಥಿನಿಯರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕಾಗುವ ಮಹತ್ವದ ಬಗ್ಗೆ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವರ್ಣಲತಾ ಸಲಹೆ ನೀಡಿದರು.
ಈ ಸಂದರ್ಭ ವಿದ್ಯಾರ್ಥಿನಿಯರು ವಿಶ್ವ ಕ್ಯಾನ್ಸರ್ ದಿನದ ಪ್ರತಿಜ್ಞೆ ಮಾಡಿದರು. ವಿಭಾಗದ ಮುಖ್ಯಸ್ಥ ಡಾ. ಅಭಿಜಿತ್ ಎಂ. ಸಿಂಗ್ ಹಾಗೂ ಇತರರು ಇದ್ದರು.