ಚಪ್ಪರದಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಲಯಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಾಲೂಕುಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಲೆ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಓಂಕಾರ್ ಮೂರ್ತಿ, ದಿವ್ಯಾ, ಉಷಾ, ಜಗದೀಶ್, ಸಚಿನ್ ಇತರರಿದ್ದರು. 
ಮೈಸೂರು

ಚಪ್ಪರದಹಳ್ಳಿ ಶಾಲಾ ಮಕ್ಕಳು ತಾಲೂಕುಮಟ್ಟಕ್ಕೆ ಆಯ್ಕೆ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗಿರಗೂರಿನಲ್ಲಿ ಇತ್ತೀಚೆಗೆ ನಡೆದ ವಲಯಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಖೋ-ಖೋ ಸ್ಪರ್ಧೆಯಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ದ್ವಿತೀಯ, ಉದ್ದ ಜಿಗಿತದಲ್ಲಿ ಪ್ರಥಮ, ರಿಲೇಯಲ್ಲಿ ಪ್ರಥಮ, 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಓಟದಲ್ಲಿ ಪ್ರಥಮ ಹಾಗೂ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಬಾಲಕರ ವಿಭಾಗದ 600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಖ್ಯಶಿಕ್ಷಕ ಎಂ.ಸಿ.ಓಂಕಾರ್ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಕ್ರೀಡೆಯು ಮಕ್ಕಳಲ್ಲಿ ದೈಹಿಕ ಸಾಮರ್ಥ್ಯದ ಜತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತದೆ. ನಮ್ಮ ಶಾಲೆಯ ವಿದ್ಯಾರ್ಥಿಗಳು ವಲಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮುಂದಿನ ಹಂತದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು. ಶಿಕ್ಷಕರಾದ ದಿವ್ಯಾ, ಉಷಾ, ಜಗದೀಶ್ ಹಾಗೂ ಸಚಿನ್ ಉಪಸ್ಥಿತರಿದ್ದರು.